ಜಮ್ಮು-ಕಾಶ್ಮೀರದಲ್ಲಿ ಅಪಘಾತ: 7 ಮಂದಿ ಮೃತ್ಯು, ಓರ್ವ ಗಂಭೀರ ಗಾಯ
ಕಿಶ್ತ್ವಾರ್: ಪಾಕಲ್ ದುಲ್ ಪ್ರಾಜೆಕ್ಟ್‌ನ ಕ್ರೂಸರ್ ವಾಹನವು ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಘಟನೆ ದಂಗದೂರು ಅಣೆಕಟ್ಟು ಸ್ಥಳದಲ್ಲಿ ನಡೆದಿದೆ.
"7 ಜನರು ಸಾವನ್ನಪ್ಪಿದ್ದಾರೆ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ.
ಅಗತ್ಯಕ್ಕೆ ತಕ್ಕಂತೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಅವರು ತಿಳಿಸಿದರು.
ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಸ್ತೆ ಅಪಘಾತದ ಬಗ್ಗೆ ಡಿಸಿ ಯಾದವ್ ಅವರೊಂದಿಗೆ ಮಾತನಾಡಿದರು.
"7 ಮಂದಿ ಸಾವನ್ನಪ್ಪಿದ್ದಾರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಕಿಶ್ತ್ವಾರ್ ಅಥವಾ ಜಿಎಂಸಿ ದೋಡಾಕ್ಕೆ ಅಗತ್ಯಕ್ಕೆ ಅನುಗುಣವಾಗಿ ಸ್ಥಳಾಂತರಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುವುದು" ಎಂದು ಕೇಂದ್ರ ಸಚಿವರು ಹೇಳಿದರು.