ಕೇರಳದ ಕಣ್ಣೂರಿನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
Update: 2023-05-24 12:01 IST
ಕಣ್ಣೂರು (ಕೇರಳ): ಕೇರಳದ ಕಣ್ಣೂರು ಜಿಲ್ಲೆಯ ಚೆರುಪುಳದಲ್ಲಿರುವ ತಮ್ಮ ನಿವಾಸದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕಳೆದ ವಾರ ಮದುವೆಯಾಗಿದ್ದ ದಂಪತಿ ಮಕ್ಕಳನ್ನು ಕೊಂದು ನಂತರ ನೇಣು ಹಾಕಿಕೊಂಡಿದ್ದು ಇದು ಕೊಲೆ-ಆತ್ಮಹತ್ಯೆ ಪ್ರಕರಣವಾಗಿ ಕಾಣುತ್ತಿದೆ.
ಮಕ್ಕಳು ಮೆಟ್ಟಿಲು ಬಳಿ ಹಾಗೂ ದಂಪತಿ ಮನೆಯಲ್ಲಿದ್ದ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೂವರು ಮಕ್ಕಳು ಮಹಿಳೆಯ ಮೊದಲ ಮದುವೆಯ ನಂತರ ಜನಿಸಿದ್ದರು.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಇಂತಹ ಘಟನೆ ನಡೆದಿರುವ ಬಗ್ಗೆ ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.