ಮೇ 28ರಂದು ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ
ಉಡುಪಿ, ಮೇ 24: ಉಡುಪಿ ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ 21ನೇ ವರ್ಷದ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 28ರಂದು ಸಂಜೆ 4ಗಂಟೆಗೆ ಉಡುಪಿ ನಗರದ ಕಿದಿಯೂರ್ ಹೊಟೇಲಿನ ಪವನ್ ರೂಫ್‌ಟಾಪ್ ಹಾಲ್‌ನಲ್ಲಿ ನಡೆಯಲಿದೆ.
2022ನೇ ಸಾಲಿನ ಪಣಿಯಾಡಿ ಕಾದಂಬರಿ ಪ್ರಶಸ್ತಿ ವಿಜೇತ ‘ದೇರಮಾಮುನ ದೂರನೋಟೋಲು’ ತುಳು ಕಾದಂಬರಿ ಬಿಡುಗಡೆ ಹಾಗೂ ಕೃತಿಕಾರೆ ಯಶೋಧಾ ಮೋಹನ್ ಅವರಿಗೆ ದಿ.ಎಸ್.ಯು.ಪಣಿಯಾಡಿ ಸ್ಮಾರಕ ನಗದು ಸಹಿತ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.
ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿರುವರು. ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ, ಚಲನಚಿತ್ರ ನಟಿ ಹರಿಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಮಾಜ ಸೇವಕ ವಿಶ್ವನಾಥ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಜಾನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರ್ ಕೃತಿ ಪರಿಚಯ ಮಾಡಲಿರುವರು ಎಂದು ಪ್ರಕಟನೆ ತಿಳಿಸಿದೆ.