×
Ad

ಉಚಿತ ಪ್ರಯಾಣ | ಮಹಿಳೆಯರು-ಸಿಬ್ಬಂದಿಗಳ ನಡುವೆ ವಾಗ್ವಾದ; ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸಿಎಂಗೆ ಮನವಿ

Update: 2023-05-24 19:36 IST

ಬೆಂಗಳೂರು, ಮೇ 24: ರಾಜ್ಯ ಸರಕಾರ ಶೀಘ್ರವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸುವ ನಿರ್ಧಾರ ತೆಗೆದುಕೊಂಡು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕೆಂದು ಕೆಎಸ್ಸಾರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್‍ನ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ ಮನವಿ ಮಾಡಿದ್ದಾರೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ಮಹಿಳೆಯರಿಗೆ ಉಚಿತ ಸರಕಾರಿ ಬಸ್ ಪ್ರಯಾಣ ಕಲ್ಪಿಸುವುದಾಗಿ ಕಾಂಗ್ರೆಸ್ ಘೋಷಿಸಿದ್ದ ಹಿನ್ನೆಲೆ, ಪಕ್ಷ ಅಧಿಕಾರಕ್ಕೆ ಬಂದಿದ್ದು, ಅನೇಕ ಕಡೆಗಳಲ್ಲಿ ಮಹಿಳಾ ಪ್ರಯಾಣಿಕರು ಹಣ ನೀಡದೆ ಬಸ್ ನಿರ್ವಾಹಕರ ಮೇಲೆ ಒತ್ತಡ ಹಾಕುತ್ತಿರುವುದರಿಂದ ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ನಡುವೆ ವಾಗ್ವಾದಗಳು ನಡೆಯುತ್ತಿದೆ. ಆದ್ದರಿಂದ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಸರಕಾರ ಈ ತೀರ್ಮಾನವನ್ನು ಜಾರಿ ಮಾಡಲು ಕೆಎಸ್ಸಾರ್ಟಿಸಿಗೆ ತಗುಲುವ ಆರ್ಥಿಕ ಹೊರೆಯನ್ನು ಸೂಕ್ತ ಅಂದಾಜು ಮಾಡಿ ನಿಗಮಗಳಿಗೆ ವೆಚ್ಚದ ಮುಂಗಡವನ್ನು ಮಂಜೂರು ಮಾಡಬೇಕೆಂದು ವಿಜಯಭಾಸ್ಕರ್ ಮನವಿಯಲ್ಲಿ ತಿಳಿಸಿದ್ದಾರೆ.

Similar News