×
Ad

ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

Update: 2023-05-24 19:45 IST

ಉಡುಪಿ, ಮೇ 24: ದಯಾಲಕ್ಷ್ಮೀ ಎಂಬ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ ಒಡಿಸ್ಸಾ ಮೂಲಕ ಮಜಾಯಿ ಮಜಿ (31) ಎಂಬಾತನು ಮೇ 11 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. 

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ  ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430ನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News