×
Ad

60 ಲಕ್ಷ ರೂ. ಮೌಲ್ಯದ 148 ಮೊಬೈಲ್ ಫೋನ್ ಗಳನ್ನು CEIR ಆ್ಯಪ್ ಮೂಲಕ ಪತ್ತೆ ಹಚ್ಚಿದ ಹಾಸನ ಪೊಲೀಸರು!

Update: 2023-05-24 22:21 IST

ಹಾಸನ: ಜಿಲ್ಲಾ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್,  ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ ಕಳ್ಳತನವಾಗಿದ್ದ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ಅದರ ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಹಾಸನ ಜಿಲ್ಲಾ ಎಸ್‌ಪಿ ಹರಿರಾಂ ಶಂಕರ್ ನೇತೃದಲ್ಲಿತ್ವದಲ್ಲಿ ಜಿಲ್ಲಾ ಪೊಲೀಸರ  ಕಾರ್ಯಾಚರಣೆಯಲ್ಲಿ ಬರೊಬ್ಬರಿ 148 ಮೊಬೈಲ್ ಫೋನ್ ದಸ್ತಗಿರಿ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ದಾಖಲಾದ ದೂರುಗಳ ಬೆನ್ನತ್ತಿದ ಸಿಬ್ಬಂದಿ ಆನ್‌ಲೈನ್ ಪೋರ್ಟಲ್ ಮೂಲಕ ನೋಂದಣಿಯಾಗಿದ್ದ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿಯೂ ಕಾರ್ಯಾಚರಣೆ ನಡೆಸಿ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಮೊಬೈಲ್ ಕಳೆದುಕೊಂಡಿದ್ದ ಮಾಲಕರು ಮೊಬೈಲ್ ವಾಪಾಸ್ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ. 

CEIR ಪೋರ್ಟಲ್ ಮೂಲಕ ಮೊಬೈಲ್‍ಗಳ ಪತ್ತೆಗಾಗಿ ಶ್ರಮಿಸಿದ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ಪೀರ್ ಖಾನ್ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಇದೆ ವೇಳೆ ಶ್ಲಾಘಿಸಿದರು. 

Similar News