ಕೊಡಗಿನ ವಿವಿಧೆಡೆ ಮಳೆ: ಮನೆ, ವಿದ್ಯುತ್ ಕಂಬಗಳಿಗೆ ಹಾನಿ
Update: 2023-05-24 23:27 IST
ಮಡಿಕೇರಿ, ಮೇ 24: ಕೊಡಗು ಜಿಲ್ಲೆಯ ವಿವಿಧೆಡೆ ಸುರಿದ ಧಾರಕಾರ ಮಳೆಯಿಂದಾಗಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಮಾಲಂಬಿ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಎಮ್ಮೆಮಾಡು ಗ್ರಾಮದ ಶಫೀಕ್ ಎಂಬವರ ಮನೆಯ ಮೇಲೆ ಸಿಲ್ವರ್ ಮರ ಬಿದ್ದ ಪರಿಣಾಮವಾಗಿ ಮೇಲ್ಛಾವಣಿಯ 5 ಶೀಟುಗಳು ಹಾನಿಗೊಂಡಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.