ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಮುಂದುವರಿಯಲಿದ್ದಾರೆ: ಕುಮಾರಸ್ವಾಮಿ

Update: 2023-05-26 10:05 GMT

ಬೆಂಗಳೂರು: 'ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಮುಂದುವರಿಯಲಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 

ಶುಕ್ರವಾರ ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸೋಲಿನ ನೈತಿಕ ಹೊಣೆ ಹೊತ್ತು ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಅಂಗೀಕರಿಸಲ್ಲ, ಈ ಬಗ್ಗೆ ಪಕ್ಷದಲ್ಲಿ ತೀರ್ಮಾನ ಆಗಿದೆ. ನಿಖಿಲ್ ಕೂಡ ಯುವ ಘಟಕದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು. 

''ಚುನಾವಣೆಗೂ ಮುನ್ನ ಕಾಂಗ್ರೆಸ್​​ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ. ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ​. ಯಾವ ಮಹಿಳೆ ಕೂಡ ಟಿಕೆಟ್​ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸಿ'' ಎಂದು ಕುಮಾರಸ್ವಾಮಿ ಕರೆ ನೀಡಿದರು.

Similar News