×
Ad

ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Update: 2023-05-26 15:32 IST


ಮಂಗಳೂರು,ಮೇ 26: ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ್ ಸಂಘ(ರಿ) ವತಿಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2022 ಅನುಷ್ಠಾನದ ಸವಾಲುಗಳು ಮತ್ತು ಪಠ್ಯಕ್ರಮ ಹಾಗೂ ವೌಲ್ಯಮಾಪನ ಮತ್ತು ಫಲಿತಾಂಶದ ಮುಂದುವರಿಕೆ ವಿಷಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವು ಇಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜರುಗಿತು.


  ಎಬಿಆರ್‌ಎಸ್‌ಎಂ ರಾಷ್ಟ್ರೀಯ ಜಂಟಿ ಸಂಸ್ಥೆಯ ಕಾರ್ಯದರ್ಶಿ ಜಿ.ಲಕ್ಷ್ಮಣ್ ದೀಪ ಬೆಳಗಿಸಿ, ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಬಿಆರ್‌ಎಸ್‌ಎಂನ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖ್ ಡಾ.ರಘು ಅಕಮಂಚಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ.ಪಿ.ಎಸ್ ಯಡಪಡಿತ್ತಾಯ, ಕೆಆರ್‌ಎಂಎಸ್‌ಎಸ್‌ನ ರಾಜ್ಯಾಧ್ಯಕ್ಷ ಡಾ.ಗುರುನಾಥ್ ಬಡಿಗೇರ್, ಮಂಗಳೂರು ವಿಶ್ವವಿದ್ಯಾನಿಲಯದ ಕೋಶಾಧಿಕಾರಿ ಆಶಾಲತಾ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ನಿರ್ದೇಶಕ ಡಾ.ಮಂಜಯ್ಯ ಡಿ.ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವಿಚಾರ ಸಂಕಿರಣಕ್ಕೆ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗಮಿಸಿದ್ದರು.

Similar News