ಖ್ಯಾತ ವಿಮರ್ಶಕ ಜಿ.ಎಚ್​.ನಾಯಕ್ ನಿಧನ

Update: 2023-05-26 10:37 GMT

ಮೈಸೂರು: ಮೈಸೂರು: ಖ್ಯಾತ ವಿಮರ್ಶಕ ಸಾಹಿತಿ ಪ್ರೊ.ಜಿ.ಎಚ್.ನಾಯಕ್ (82) ಧೀರ್ಘಕಾಲದ ಅನಾರೋಗ್ಯದಿಂದ  ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು (ಮೇ 26) ಮೈಸೂರಿನ ಕುವೆಂಪು ನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದವರಾದ ಜಿ.ಹೆಚ್​. ನಾಯಕ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ, ಮುಂದೆ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರು ನಿವೃತ್ತಿ ಬಳಿಕ ಮೈಸೂರಿನ ಕುವೆಂಪು ನಗರದಲ್ಲಿ ನೆಲೆಸಿದ್ದರು.

ತಮ್ಮ ನಿಷ್ಠುರ ಮಾತು, ವಿಮರ್ಶೆಯಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಸಿದ್ಧರಾಗಿದ್ದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತ ಪ್ರಶಸ್ತಿಗಳು ಲಭಿಸಿವೆ. ಪ್ರೊ.ಜಿ.ಎಚ್.ನಾಯಕರಿಗೆ ಪತ್ನಿ ಹೋರಾಟಗಾರ್ತಿ ಮೀರಾ ನಾಯಕ್, ಪುತ್ರಿ ದೀಪಾ ಇದ್ದಾರೆ. ಮೈಸೂರಿನ ಸರಸ್ವತಿಪುರಂ ನಲ್ಲಿ ನೆಲೆಸಿದ್ದ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

► ಸಿಎಂ ಸಿದ್ದರಾಮಯ್ಯ ಸಂತಾಪ

''ಪ್ರಸಿದ್ಧ ಸಾಹಿತಿ ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Similar News