×
Ad

ರಾಹುಲ್, ಸೋನಿಯಾರನ್ನು ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್

Update: 2023-05-26 18:42 IST

ಹೊಸದಿಲ್ಲಿ: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠಾರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. 

ಸದ್ಯ ಸಂಪುಟ ವಿಸ್ತರಣೆ ಚರ್ಚೆ ಮುಕ್ತಾಯಗೊಂಡಿದ್ದು, ಖಾತೆಗಳ‌ ಹಂಚಿಕೆ ಬಗ್ಗೆ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಅಲ್ಲದೇ ರಾತ್ರಿಯೊಳಗಾಗಿ ಸಚಿವ ಸಂಪುಟದ ಪಟ್ಟಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

Similar News