ಮಹಿಳೆ ನಾಪತ್ತೆ

Update: 2023-05-26 15:15 GMT

ಉಡುಪಿ, ಮೇ 26: ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆ ಜನವರಿ 3ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News