ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಪಕ್ಷದ ಅಭಿನಂದನೆ

Update: 2023-05-26 16:00 GMT

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಜಯಗಳಿಸಿದ ಐವರು ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಸಂಜೆ ಸನ್ಮಾನಿಸಲಾಯಿತು.

ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಯಶ್ಪಾಲ್ ಎ. ಸುವರ್ಣ,  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳಿ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ ಶೆಟ್ಟಿ, ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮನೋಹರ ಎಸ್. ಕಲ್ಮಾಡಿ, ಕ್ಷೇತ್ರದ ಚುನಾವಣಾ ಪ್ರಭಾರಿ ಗಣೇಶ್ ಹೊಸಬೆಟ್ಟು, ಜಿಲ್ಲಾ ಉಪಾಧ್ಯಕ್ಷ ರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಜಿಲ್ಲಾ ಬಿಜೆಪಿ ಮುಖಂಡರಾದ ಸತ್ಯಾನಂದ ನಾಯಕ್, ನಗರಸಭೆಯ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ನಾಯಕ್, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ವೀಣಾ ನಾಯ್ಕ್, ಶಿವಕುಮಾರ ಅಂಬಲ ಪಾಡಿ, ಗಿರೀಶ್ ಎಂ. ಅಂಚನ್, ಅಕ್ಷಿತ್ ಶೆಟ್ಟಿ ಹೆರ್ಗ, ವಿಜಯಕುಮಾರ ಉದ್ಯಾವರ, ವಿಜಯ ಕೊಡವೂರು, ದಿನೇಶ್ ಅಮೀನ್, ರಾಘವೇಂದ್ರ ಕುತ್ಪಾಡಿ, ಚಂದ್ರಶೇಖರ ಪ್ರಭು, ಶ್ಯಾಮಲಾ ಎಸ್. ಕುಂದರ್, ಶಿಲ್ಪಾ ಜಿ. ಸುವರ್ಣ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ರೋಷನ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Similar News