ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸೇರಿ ನಿಗಮ, ಮಂಡಳಿಗಳ ನಾಮ ನಿರ್ದೇಶನ ರದ್ದು: ಆದೇಶ

Update: 2023-05-26 16:25 GMT

ಬೆಂಗಳೂರು, ಮೇ 26: ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಆರಾಧನಾ ಸಮಿತಿ, ಶ್ರೀ ಮಲೈ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿನ ಸರಕಾರದಿಂದ ನಾಮ ನಿರ್ದೇಶಿತ ಸದಸ್ಯರ ಸದಸ್ಯತ್ವವನ್ನು ಮೇ 22ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.

ಅಲ್ಲದೆ, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ವ್ಯಾಪ್ತಿಯಲ್ಲಿನ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರೆ ಸರಕಾರಿ, ಅರೆ ಸರಕಾರಿ ಹಾಗೂ ಇತರೆ ಎಲ್ಲ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನಾಮ ನಿರ್ದೇಶನಗಳನ್ನು ಮೇ 22ರಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ(ಧಾರ್ಮಿಕ ದತ್ತಿ)ಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

Similar News