ದೇಶಪಾಂಡೆ, ಸವದಿ ಸೇರಿ ಹಿರಿಯರಿಗೆ ಕೈ ತಪ್ಪಿದ ಸಚಿವ ಸ್ಥಾನ

Update: 2023-05-26 19:21 GMT

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದ್ದು, ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಕೆಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸ್ಪೀಕರ್ ಹುದ್ದೆ ಸ್ವೀಕರಿಸಲು ನಿರಾಕರಿಸಿದ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾದ ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರಗೆ ಕೂಡ ಸಚಿವ ಸ್ಥಾನ ಕೈ ತಪ್ಪಿದೆ.

ಇದನ್ನೂ ಓದಿಸಿದ್ದರಾಮಯ್ಯ ಸಂಪುಟದ ನೂತನ ಸಚಿವರ ಕಿರು ಪರಿಚಯ ಇಲ್ಲಿದೆ...

ಉಳಿದಂತ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನಪರಿಷತ್ತಿನ ಹಿರಿಯ ಸದಸ್ಯ ನಸೀರ್ ಅಹ್ಮದ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಸವರಾಜ ರಾಯರಡ್ಡಿ, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ತನ್ವೀರ್ ಸೇಠ್ ಸೇರಿದಂತೆ ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದೆ. 

ಇನ್ನು ಶನಿವಾರ  ರಾಜಭವನದ ಗಾಜಿನಮನೆಯಲ್ಲಿ ಬೆಳಗ್ಗೆ 11:30ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Similar News