×
Ad

ಶಾಂತಿ ಕದಡಲು ಪ್ರಯತ್ನಿಸಿ ನೋಡಿ, ಆಗ ಸಂವಿಧಾನದ ಪವರ್ ತೋರಿಸುತ್ತೇವೆ: ಬಿಜೆಪಿಗೆ ಪ್ರಿಯಾಂಕ್ ತಿರುಗೇಟು

Update: 2023-05-27 09:56 IST

ಕಲಬುರಗಿ, ಮೇ 27: ''ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ'' ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್, ಬಿಜೆಪಿಗರು, "ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ." ಎಂದು ಖಡಕ್ ಆಗಿ ಹೇಳಿದ್ದಾರೆ.

Similar News