ದಿಲ್ಲಿಯಲ್ಲಿ ಭಾರೀ ಮಳೆ: ವಿಮಾನ ಹಾರಾಟದಲ್ಲಿ ವ್ಯತ್ಯಯ,ಇಂದು ಹೆಚ್ಚಿನ ಮಳೆಯ ಮುನ್ಸೂಚನೆ

Update: 2023-05-27 04:41 GMT

ಹೊಸದಿಲ್ಲಿ: ದಿಲ್ಲಿಯಲ್ಲಿ  ಇಂದು ಮುಂಜಾನೆ ಸುರಿದ ಭಾರೀ ಮಳೆ ಹಾಗೂ  ಬಿರುಸಿನ ಗಾಳಿಯಿಂದ ಸೆಖೆಯಿಂದ ತತ್ತರಿಸಿದ್ದ ಜನತೆ ನಿಟ್ಟುಸಿರುಬಿಟ್ಟಿದ್ದಾರೆ.  ಮಳೆಯಿಂದಾಗಿ ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಿದ್ದು, ನಗರದಲ್ಲಿ ಅಲ್ಲಲ್ಲಿ ಮರಗಳು ಧರೆಗುರುಳಿವೆ.

ರಾಷ್ಟ್ರ ರಾಜಧಾನಿ, ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಸಮೀಪದ ಪ್ರದೇಶಗಳಿಗೆ ಇಂದು ಬೆಳಿಗ್ಗೆ ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಮಂಗಳವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು.

ಭಾರೀ ಮಳೆ ಹಾಗೂ  ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಿಮಾನಗಳ ಕಾರ್ಯಾಚರಣೆಗೆ ತೊಂದರೆಯಾಗಿದೆ.

ಮಳೆ-ಗಾಳಿಯು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ ಹಾಗೂ  ವಿಮಾನ ಪ್ರಯಾಣಿಕರು  ಹೊಸ  ಮಾಹಿತಿಗಾಗಿ ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ದಿಲ್ಲಿ ವಿಮಾನ ನಿಲ್ದಾಣ ಹೇಳಿಕೆಯೊಂದರಲ್ಲಿ ತಿಳಿಸಿದೆ.

Similar News