ಶಾಂತಿ, ಸಾಮರಸ್ಯ ಕದಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Update: 2023-05-27 06:14 GMT

ಬೆಂಗಳೂರು, ಮೇ 27: ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಗಳಿರಲಿ ಅವುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರಕಾರ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಇಂದು ಅಥವಾ ನಾಳೆ ಖಾತೆಗಳ ಹಂಚಿಕೆ ಮಾಡಲಾಗುವುದು ಎಂದರು.

Similar News