ಸಂಪುಟ ವಿಸ್ತರಣೆ: 24 ಮಂದಿ ನೂತನ ಸಚಿವರಿಂದ ಪ್ರಮಾಣ ವಚನ

Update: 2023-05-27 07:40 GMT

ಬೆಂಗಳೂರು, ಮೇ 27: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ 24 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದಿದೆ.

ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿMLA , MLC ಆಗಿಲ್ಲದ ಎನ್.ಎಸ್.ಬೋಸರಾಜುಗೆ ಒಲಿದ ಸಚಿವ ಸ್ಥಾನ!

ಮೊದಲನೆಯದಾಗಿ ಎಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್ (ಅಣ್ಣ ಬಸವಣ್ಣ), ಆರ್.ಬಿ.ತಿಮ್ಮಾಪುರ್, ಎಸ್.ಎಸ್.ಮಲ್ಲಿಕಾರ್ಜುನ್ (ಕಲ್ಲೇಶ್ವರ್ ದೇವರ ಹೆಸರಿನಲ್ಲಿ), ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕೃಷ್ಣ ಭೈರೇಗೌಡ, ಚಲುವರಾಯ ಸ್ವಾಮಿ, ಕೆ.ವೆಂಕಟೇಶ್, ಡಾ. ಎಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎನ್.ರಾಜಣ್ಣ ಬುದ್ದ, ಬಸವ, ಅಂಬೇಡ್ಕರ್, ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್ ಹಾಜರಿದ್ದರು.

► ► ಪ್ರಮಾಣ ವಚನ ಸ್ವೀಕರಿಸಿದವರು: ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್​. ಚಲುವರಾಯಸ್ವಾಮಿ, ಕೆ.ವೆಂಕಟೇಶ್​, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್​ ಎಸ್​ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್​.

►► ಸಿಎಂ, ಡಿಸಿಎಂ ಜತೆ ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಿದವರು

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ,  ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಅವರು ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜತೆ ಡಾ.ಜಿ. ಪರಮೇಶ್ವರ, ಕೆ.ಎಚ್ ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಪ್ರಿಯಾಂಕ ಖರ್ಗೆ, ಝಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Full View

Similar News