ಸಂಪುಟ ವಿಸ್ತರಣೆ: 24 ಸಚಿವರ ಪೈಕಿ ಇದೇ ಮೊದಲ ಬಾರಿ ಸಚಿವರಾದವರು ಯಾರ್ಯಾರು?

Update: 2023-05-27 09:04 GMT

ಬೆಂಗಳೂರು, ಮೇ 27: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದಿದೆ.

ನೂತನ 24 ಸಚಿವರ ಪೈಕಿ ಇದೇ ಮೊದಲ ಬಾರಿಗೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕೆ ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ (ಕೆ.ಎನ್ ರಾಜಣ್ಣ), ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ್ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ  ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ‌ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ.ನಾಗೇಂದ್ರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಉಳಿದವರು ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿದ್ದಾರೆ.

Similar News