×
Ad

ವಿರೋಧ ಪಕ್ಷಕ್ಕೆ ಬಿಜೆಪಿಯಲ್ಲಿ ಸಮರ್ಥ ನಾಯಕರಿಲ್ಲ: ಕಾಂಗ್ರೆಸ್

Update: 2023-05-27 15:22 IST

ಬೆಂಗಳೂರು: ಚುನಾವಣಾ ಫಲಿತಾಂಶ ಹೊರ ಬಂದು ಎರಡು ವಾರಗಳಾದರೂ ಬಿಜೆಪಿಯಲ್ಲಿ ಇನ್ನೂ ವಿರೋಧ ಪಕ್ಷದ ನಾಯಕರ ಆಯ್ಕೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಕಾಂಗ್ರೆಸ್ ಟೀಕಿಸಿದೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು, ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ ಎಂದು ಹೇಳಿದೆ.

ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರೂ ಬಿಜೆಪಿ ನಮ್ಮನ್ನು ವಿರೋಧಿಸಲಿ ಎಂದು ಸವಾಲು ಹಾಕಿದೆ.

ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಸಿ ಎಂ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಪುಟ ಸಹೋದ್ಯೋಗಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು.

ಒಂದು ಸರ್ಕಾರವಾಗಿ ನಾವೆಲ್ಲರೂ ಜನರ ಸಮಸ್ಯೆಗಳಿಗೆ ಅಂತಃಕರಣದಿಂದ ಸ್ಪಂದಿಸುವ ಮೂಲಕ ನಮ್ಮ ಮೇಲಿನ ನಂಬಿಕೆ ಮತ್ತು ನಿರೀಕ್ಷೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡೋಣ.

ನಿಮ್ಮ ಎಲ್ಲಾ ಜನಪರ, ಸಂವಿಧಾನಬದ್ಧ ಕಾರ್ಯಗಳಿಗೆ ನನ್ನ ಪೂರ್ಣ ಸಹಕಾರ ಇದೆ. ಶುಭವಾಗಲಿ ಎಂದು ಹಾರೈಸಿದ್ದಾರೆ.

Similar News