ಹಾಸನ: ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Update: 2023-05-27 14:33 GMT

ಅರಕಲಗೂಡು: ಮೆ 27: 'ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ  ಹಚ್ಚಿರುವ ಘಟನೆ ತಾಲೂಕಿನ ಕೊಣನೂರಿನಲ್ಲಿ ವರದಿಯಾಗಿದೆ.

ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ  ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News