ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ; ಹವಾಮಾನ ಇಲಾಖೆ

Update: 2023-05-27 15:44 GMT

ಬೆಂಗಳೂರು, ಮೇ 27: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. 

ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆ: ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬಿಬಿಎಂಪಿ ವ್ಯಾಪ್ತಿಯ ಹಲವು ಭಾಗಗಳಲ್ಲಿ ಮೇ 28 ಮತ್ತು 29ರಂದು  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾತ್ರಿ ವೇಳೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬೀಳಲಿದೆ.

Similar News