ಮಂಗಳೂರು: ವಜ್ರ ಕಳ್ಳ ಸಾಗಣೆ; ಆರೋಪಿ ಬಂಧನ

Update: 2023-05-28 12:34 GMT

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ 1.69 ಕೋ.ರೂ. ಮೌಲ್ಯದ 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಕಾಸರಗೋಡು ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಕಸ್ಟಮ್ಸ್ ಇಲಾಖೆ ಕಚೇರಿಯು ಈ ಬಗ್ಗೆ ಟ್ವೀಟ್ ಮಾಡಿ ಮೇ 25ರಂದು ದುಬೈಗೆ ತೆರಳಬೇಕಾಗಿದ್ದ ಪ್ರಯಾಣಿಕ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ. ತಕ್ಷಣ ಆತನನ್ನು ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದೆ.

ದುಬೈಗೆ ತೆರಳಲಿದ್ದ ಪ್ರಯಾಣಿಕನನ್ನು ಸಿಐಎಸ್‌ಎಫ್ ಸಿಬ್ಬಂದಿ ತಪಾಸಣೆ ಮಾಡುವಾಗ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಎರಡು ಪೊಟ್ಟಣಗಳಲ್ಲಿ ವಜ್ರ ಕಂಡು ಬಂದಿದೆ. ಇದನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ 13 ಸಣ್ಣದ ಪೊಟ್ಟಣಗಳಲ್ಲಿ ವಜ್ರದ ಹರಳುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು ಎಂದು ತಿಳಿಸಿದೆ.

Similar News