ಯಕ್ಷಗಾನ ಕಲಾರಂಗದ ತಾಳಮದ್ದಲೆ ಸಪ್ತಾಹ ಸಮಾರೋಪ

Update: 2023-05-28 15:14 GMT

ಉಡುಪಿ, ಮೇ 28: ಯಕ್ಷಗಾನ ಕಲಾರಂಗ ಆಯೋಜಿಸಲಾದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭವು ಶನಿವಾರ ಶಿರ್ವದ ಮಹಿಳಾ ಸೌಧದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀಕರ ಭಟ್ ಅವರಿಗೆ ಮಟ್ಟಿ ಮುರಲೀಧರ ರಾವ್ ಪ್ರಶಸ್ತಿ ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಡಾ.ಪಾದೇಕಲ್ಲು ವಿಷ್ಣು ಭಟ್ ಅವರಿಗೆ ಪ್ರದಾನ ವಾಡಲಾಯಿತು. ಪ್ರಶಸ್ತಿಯು 20ಸಾವಿರ ರೂ. ನಗದು ಮತ್ತು ಪ್ರಶಸಿತಿ ಪತ್ರವನ್ನೊಳಗೊಂಡಿದೆ.

ಇದೇ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟಿ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾ ಯಿತು. ಬಳಿಕ ಮಾತನಾಡಿದ ಅವರು, ಕಾಪು ವಿಧಾನಸಭಾ ಕ್ಷೇತ್ರದ ಕೆಲವು ಶಾಲೆಗಳಲ್ಲಾದರೂ ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ ಪ್ರದರ್ಶನ ವ್ಯವಸ್ಥೆ ಮಾಡಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದರು.

ಅಧ್ಯಕ್ಷತೆಯನ್ನು ಪೆರ್ಲ ಪ್ರಶಸ್ತಿ ಸ್ಥಾಪಿಸಿದ ಕೃಷ್ಣಪ್ರಸಾದ್ ಅಡ್ಯಂತಾಯ ವಹಿಸಿದ್ದರು. ಶಿರ್ವದ ನಿವೃತ್ತ ಮುಖ್ಯೋ ಪಾಧ್ಯಾಯ ರಾಮ ಶೆಟ್ಟಿ ಹಾಗೂ ಯಕ್ಷಗಾನ ಅಭಿಮಾನಿ ಬಳಗದ ಪ್ರಮುಖ ಶ್ರೀಪತಿ ಕಾಮತ್ ಶುಭ ಹಾರೈಸಿದರು.  ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ ಹಾಗೂ ಪೆರ್ಲ ರಾಜಾರಾವ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಸಂಸ್ಥೆಯ ಜತೆ ಕಾರ್ಯದರ್ಶಿ ನಾರಾಯಣ ಎಂ.ಹೆಗಡೆ ಸನ್ಮಾನಿತರನ್ನು ಪರಿಚಯಿದರು. ಎಚ್.ಎನ್.ಶೃಂಗೇಶ್ವರ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶ್ರೀಕೃಷ್ಣ ಸಂಧಾನ ತಾಳಮದ್ದಲೆ ಸಂಪನ್ನಗೊಂಡಿತು.

Similar News