ಕುಷ್ಟಗಿ ಬಳಿ ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Update: 2023-05-28 16:32 GMT

ಕೊಪ್ಪಳ, ಮೇ 28: ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮಕ್ಕಳು ಸೇರಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ 2 ಲಕ್ಷ ರೂ.ಪರಿಹಾರ ನೀಡಲಾಗುವುದು' ಎಂದು ತಿಳಿಸಿದ್ದಾರೆ. 

'ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ' ಎಂದು ಮುಖ್ಯಮಂತ್ರಿಗಳು ಟ್ವಿಟ್ ಮೂಲಕ ಸಲಹೆ ನೀಡಿದ್ದಾರೆ. 

Similar News