ಪ್ರಧಾನಿಯಿಂದ ನೂತನ ಸಂಸತ್ ಭವನ ಉದ್ಘಾಟನೆ: ಸ್ವಾಗತಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Update: 2023-05-28 17:30 GMT

ಹೊಸದಿಲ್ಲಿ, ಮೇ 28: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರವಿವಾರ ಸ್ವಾಗತಿಸಿದ್ದಾರೆ. ಇದು ಇಡೀ ದೇಶಕ್ಕೆ ಹೆಮ್ಮೆಯ ಹಾಗೂ ಸಂತೋಷದ ವಿಚಾರ ಎಂದು ಅವರು ಹೇಳಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತ ತನ್ನ ಸಂದೇಶದಲ್ಲಿ ಅವರು, ‘‘ನೂತನ ಸಂಸತ್ ಭವನದ ಉದ್ಘಾಟನೆ ದೇಶದ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು’’ ಎಂದಿದ್ದಾರೆ.

‘‘ನೂತನ ಸಂಸತ್ ಭವನದ ಉದ್ಘಾಟನೆ ದೇಶದ ಎಲ್ಲ ಜನರಿಗೆ ಹೆಮ್ಮೆ ಹಾಗೂ ಸಂತೋಷದ ವಿಚಾರ’’ ಎಂದು ಅವರು ಸಂದೇಶದಲ್ಲಿ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಂದೇಶವನ್ನು ರಾಜ್ಯ ಸಭಾ ಉಪಾಧ್ಯಕ್ಷ ಹರಿವಂಶ್ ಅವರು ಓದಿದರು. ಸಂಸತ್ ದೇಶಕ್ಕೆ ದಾರಿದೀಪ ಎಂದು ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ನೂತನ ಸಂಸತ್ ಭವನ ನಮ್ಮ ಪ್ರಜಾಪ್ರಭುತ್ವದ ಪ್ರಯಾಣದಲ್ಲಿ ಮೈಲುಗಲ್ಲು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು. ರಾಷ್ಟ್ರಪತಿ ಅವರೇ ಸಂಸತ್ತಿನ ಮುಖ್ಯಸ್ಥರು. ಆದುದರಿಂದ ಅವರೇ ಸಂಸತ್ ಭವನ ಉದ್ಘಾಟಿಸಬೇಕು ಎಂದು ಹಲವು ರಾಜಕೀಯ ಪಕ್ಷಗಳು ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು.

Similar News