ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತ್ಯು; ಮೂವರು ಗಂಭೀರ

Update: 2023-05-29 11:54 GMT

ಮೈಸೂರು: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಸೋಮವಾರ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ವರದಿಯಾಗಿದೆ. 

ಕೊಳ್ಳೇಗಾಲ- ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಅಪಘಾತದಲ್ಲಿ  ಐವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಕೆಲವರಿಗೆ ಗಂಭೀರ ಗಾಯಗಳಾಗಿದೆ. ಮೃತರೆಲ್ಲರೂ ಬಳ್ಳಾರಿ ಮೂಲದವರಾಗಿದ್ದ, ಪ್ರವಾಸಕ್ಕೆಂದು ಬಂದು ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರಿನಲ್ಲಿ ಸಿಲುಕಿದ್ದ ಮಗು ಸೇರಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಇದನ್ನೂ ಓದಿಮೈಸೂರು | ಟಿ.ನರಸೀಪುರ ಬಳಿ ಭೀಕರ ರಸ್ತೆ ಅಪಘಾತ: ಮೃತರ ಸಂಖ್ಯೆ 10ಕ್ಕೆ ಏರಿಕೆ

Similar News