ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ: ರಾಹುಲ್‌ ಗಾಂಧಿ

Update: 2023-05-29 13:17 GMT

ಹೊಸದಿಲ್ಲಿ: ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಿದ್ಧತೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಗೆಲುವು ಸಾಧಿಸಿದ ನಂತರ ಮಧ್ಯಪ್ರದೇಶದಲ್ಲಿ ಪಕ್ಷವು ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.  
  
"ನಾವು ಸುದೀರ್ಘ ಚರ್ಚೆ ನಡೆಸಿದ್ದೇವೆ. ನಾವು ಕರ್ನಾಟಕದಲ್ಲಿ 136 ಪಡೆಯುತ್ತೇವೆ ಎಂಬುದು ನಮ್ಮ ಆಂತರಿಕ ಮೌಲ್ಯಮಾಪನವಾಗಿತ್ತು. ಮಧ್ಯಪ್ರದೇಶದಲ್ಲಿ ನಾವು 150 ಸ್ಥಾನಗಳನ್ನು ಪಡೆಯಲಿದ್ದೇವೆ. ಕರ್ನಾಟಕದಲ್ಲಿ ನಾವು ಮಾಡಿದ್ದನ್ನು ನಾವು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ" ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Similar News