​ಜೂ.2: ಉಡುಪಿ ಜಿಲ್ಲೆಯ ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ

‘ನನ್ನ ಕ್ಷೇತ್ರ- ನನ್ನ ಕನಸು’

Update: 2023-05-29 13:45 GMT

ಉಡುಪಿ, ಮೇ 29: ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಐವರು ಶಾಸಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಜೂನ್ 2ರ ಶುಕ್ರವಾರ ಆಯೋಜಿಸಲಾಗಿದೆ.

ತಿಂಗಳೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮ  ಜೂ.2ರ ಅಪರಾಹ್ನ 3:30ರಿಂದ ಸಂಜೆ 7:00ರವರೆಗೆ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ತಿಂಳಗೆ ವಿಕ್ರಮಾರ್ಜುನ ಹೆಗ್ಡೆ ಇಂದು ಕರೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂವಾದ ಕಾರ್ಯಕ್ರಮದಲ್ಲಿ ಕಾರ್ಕಳದ ಶಾಸಕ ವಿ.ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಭಾಗವಹಿಸಲಿದ್ದು, ತಮ್ಮ ತಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತಂತೆ ತಮ್ಮ ಯೋಜನೆ, ಕನಸುಗಳನ್ನು ವಿವರಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯರಾದ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ವಹಿಸಲಿದ್ದಾರೆ. ಪತ್ರಕರ್ತ ಹಾಗೂ ಎಂಐಸಿಯ ಪ್ರಾಧ್ಯಾಪಕ ಶ್ರೀರಾಜ ಗುಡಿ ಉಪಸ್ಥಿತರಿರುವರು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಪ್ರಶ್ನೆಗಳನ್ನು ಕೇಳುವ ಅವಕಾಶಗಳಿದ್ದು, ಕ್ಷೇತ್ರದ ಸಮಸ್ಯೆ, ಅಭಿವೃದ್ಧಿ ಕುರಿತಂತೆ ಮಾತ್ರ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯಬಹುದು ಎಂದು ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯರಾದ ಕಿರಣ್‌ಕುಮಾರ್ ಬೈಲೂರು ಹಾಗೂ ಸಂತೋಷ ಜತ್ತನ್ನ ಉಪಸ್ಥಿತರಿದ್ದರು.

Similar News