ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-05-29 14:27 GMT

ಬ್ರಹ್ಮಾವರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಚೇರ್ಕಾಡಿ ಗ್ರಾಮದ ಪಾರ್ಥಿಬೆಟ್ಟು ನಿವಾಸಿ ಲಲಿತಾ ಭಟ್ (59) ಎಂಬವರು ಮೇ 29ರಂದು ಬೆಳಗ್ಗೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಪಡುತೋನ್ಸೆ ಗ್ರಾಮದ ಕೋಡಿಬೆಂಗ್ರೆ ನಿವಾಸಿ ರಿಯಾಜ್ ಎಂಬುವರು ಮೇ 25ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News