ಪುತ್ತೂರು: ಹಾಡು ಹಗಲೇ ಮನೆಗೆ ನುಗ್ಗಿ ಕಳ್ಳತನ

Update: 2023-05-29 15:42 GMT

ಪುತ್ತೂರು: ಮನೆಯೊಂದರ ಬೀಗ ಮುರಿದು ಹಾಡು ಹಗಲೇ ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಕಳವು ನಡೆಸಿ ಪರಾರಿಯಾದ ಘಟನೆ ಸೋಮವಾರ ಪುತ್ತೂರು ನಗರದ ಹೊರವಲಯದ ಬನ್ನೂರು ಎಂಬಲ್ಲಿ ನಡೆದಿದೆ.

ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮೌನೀಶ್ ಎಂಬವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಮಧ್ಯಾಹ್ನ 12 ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪುತ್ತೂರು ನಗರ ಠಾಣೆಯ ಇನ್ಸ್ಪೆಕ್ಟರ್ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಸಿಬ್ಬಂದಿಗಳಾದ ಸ್ಕರಿಯ, ವಸಂತ ಗೌಡ, ಸುಬ್ರಮಣ್ಯ ಹಾಗೂ ಪೊಲೀಸ್ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News