ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Update: 2023-05-29 16:07 GMT

ಬೆಂಗಳೂರು, ಮೇ 29: 2023-24ನೆ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೆ ತರಗತಿಯಿಂದ 10ನೆ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.inಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೆ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನೂ ಅರ್ಜಿಯಲ್ಲಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Similar News