ಜೂನ್ 8 ರಂದು ಉಡುಪಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ

Update: 2023-05-29 16:05 GMT

ಉಡುಪಿ, ಮೇ 29: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಜೂನ್ 8ರಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ 15ರಿಂದ 29 ವರ್ಷದೊಳಗಿನ ಯುವಕ, ಯುವತಿಯರಿಗೆ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ನೆಹರು ಯುವಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574992, 8762114883, 9980530553 ಅನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News