ಜಿಪಂ-ತಾಪಂ ಚುನಾವಣೆ: ಜೂ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2023-05-29 18:00 GMT

ಬೆಂಗಳೂರು, ಮೇ 29: ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ವಿಚಾರವಾಗಿ ನ್ಯಾಯಾಲಯದ ನಿರ್ದೇಶನ ಪಾಲಿಸಲು  ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದೆ.

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್  ವಿಭಾಗೀಯ ಪೀಠವು ನಡೆಸಿತು.

ಸರಕಾರದ ಪರ ವಾದಿಸಿದ ವಕೀಲರು,ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರ ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವಯ ನಾಲ್ಕು ವಾರಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಜೂನ್‌ 29ಕ್ಕೆ ಮುಂದೂಡಿತು.

Similar News