ಉಡುಪಿ | ಗೇರುಬೀಜ ಸಾಗಾಟದ ಲಾರಿ ಪಲ್ಟಿ: ಲಾರಿ ಚಾಲಕ, ಕ್ಲೀನರ್‌ಗೆ ಗಾಯ

Update: 2023-05-30 06:07 GMT

ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ಮಗುಚಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಗೇರುಬೀಜ ತುಂಬಿಕೊಂಡು ಹೋಗುತ್ತಿತ್ತು.

ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೇ ಮಗುಚಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಗೇರುಬೀಜ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

Similar News