ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡುತ್ತೇವೆ: ಮಧು ಬಂಗಾರಪ್ಪ

Update: 2023-05-30 06:48 GMT

ಬೆಂಗಳೂರು: ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡುತ್ತೇವೆ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಹಿಜಾಬ್ ವಿಚಾರ ಕೋರ್ಟ್ ನಲ್ಲಿ ಇದೆ. ಈ ಬಗ್ಗೆ  ಮುಂದೆ ಮಾತನಾಡುತ್ತೇನೆ. ನಾಳೆಯಿಂದ ಶಾಲೆ ಪ್ರಾರಂಭವಾಗಲಿದ್ದು, ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮಕ್ಕಳು ಖುಷಿಯಿಂದ ಶಾಲೆಗೆ ಬನ್ನಿ ಎಂದು ಹೇಳಿದರು. 

Similar News