ಉಡುಪಿ: ಮೇ 31ರಿಂದ ಶಾಲಾ ಪ್ರಾರಂಭೋತ್ಸವಕ್ಕೆ ಸರ್ವವೂ ಸನ್ನದ್ಧ

Update: 2023-05-30 13:50 GMT

ಉಡುಪಿ, ಮೇ 30: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾ  ಪ್ರಾರಂಭೋತ್ಸವ ಬಗ್ಗೆ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮೇ 31ರಿಂದ ಶಾಲೆಯಲ್ಲಿ ದೈನಂದಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭ ವಾಗುತ್ತವೆ.

ಜಿಲ್ಲೆಯ 5 ವಲಯದ ಎಲ್ಲಾ ಶಾಲಾ ಮುಖ್ಯ ಶಿಕ್ಷಕರ ಸಭೆಯನ್ನು ಈಗಾಗಲೇ ಕರೆದು ಅಗತ್ಯ ಮಾರ್ಗಸೂಚಿ ಮತ್ತು ನಿದೇರ್ಶನಗಳನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಈ ಸಾಲಿನ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಬಿಸಿಯೂಟದ ಜೊತೆಗೆ ಸಿಹಿ ವಿತರಿಸಲಾಗುವುದು. 

ತಳಿರು ತೋರಣಗಳೊಂದಿಗೆ ಶಾಲಾ ಕಟ್ಟಡವನ್ನು ಸಿಂಗರಿಸಿ ವಿದ್ಯಾರ್ಥಿ ಗಳನ್ನು ಬರಮಾಡಿಕೊಂಡು ಶಾಲಾ ಪ್ರಾರಂಭೋತ್ಸವ ಮಾಡಲು ಶಾಲಾ ಶಿಕ್ಷಕರಿಗೆ ತಿಳಿಸಲಾಗಿದೆ. 

ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಿ ಶಿಥಿಲಾವಸ್ಥೆ ಯಲ್ಲಿರುವ ಶಾಲಾ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸದಂತೆ ಎಲ್ಲಾ ವಲಯಗಳ ಶಾಲಾ ಶಿಕ್ಷಕರಿಗೆ ಸೂಚನೆ ಗಳನ್ನು ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News