ಬಿಡಬ್ಲ್ಯುಎಫ್ ರ್ಯಾಂಕಿಂಗ್: ಸಾತ್ವಿಕ್ ಸಾಯಿರಾಜ್- ಚಿರಾಗ್ ಶೆಟ್ಟಿ ಜೀವನಶ್ರೇಷ್ಠ ಸಾಧನೆ

Update: 2023-05-30 17:32 GMT

ಹೊಸದಿಲ್ಲಿ: ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಹಾಗೂ 

ಚಿರಾಗ್ ಶೆಟ್ಟಿ ಮಂಗಳವಾರ ಬಿಡುಗಡೆ ಯಾಗಿರುವ ಬಿಡಬ್ಲ್ಯುಎಫ್ ರ್ಯಾಂಕಿಂಗ್‌ನಲ್ಲಿ 4ನೇ ಸ್ಥಾನಕ್ಕೇರಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

ಈ ಇಬ್ಬರು ಪುರುಷರ ಡಬಲ್ಸ್‌ನಲ್ಲಿ ಜೀವನಶ್ರೇಷ್ಠ ರ್ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.

ಕಳೆದ ವರ್ಷ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಹಾಗೂ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿ ಜಯಿಸಿದ್ದ ಸಾತ್ವಿಕ್-ಚಿರಾಗ್ ಜೋಡಿ ಈ ವರ್ಷದ ಸ್ವಿಸ್ ಓಪನ್ ಸೂಪರ್ 300 ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು, 12 ಟೂರ್ನಮೆಂಟ್‌ಗಳಲ್ಲಿ 74,651 ಪಾಯಿಂಟ್ಸ್ ಗಳಿಸಿದ್ದಾರೆ.
ಕಳೆದ ವಾರ ಮಲೇಶ್ಯ ಮಾಸ್ಟರ್ಸ್ ಪ್ರಶಸ್ತಿ ಜಯಿಸಿದ್ದ ಎಚ್.ಎಸ್.ಪ್ರಣಯ್ 1 ಸ್ಥಾನ ಮೇಲಕ್ಕೇರಿ ವಿಶ್ವದ ನಂ.8ನೇ ರ್ಯಾಂಕ್ ಪಡೆದಿದ್ದಾರೆ. ಕೆ.ಶ್ರೀಕಾಂತ್ ಮೂರು ಸ್ಥಾನ ಭಡ್ತಿ ಪಡೆದು ಅಗ್ರ-20ರಲ್ಲಿ ಸ್ಥಾನ ಪಡೆದರು.

ಮಹಿಳೆಯರ ಸಿಂಗಲ್ಸ್‌ನಲ್ಲಿ ಡಬಲ್ ಒಲಿಂಪಿಯನ್ ಪಿ.ವಿ. ಸಿಂಧು 13ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಟ್ರೀಸಾ ಜೋಲಿ ಹಾಗೂ ಗಾಯತ್ರಿ ಗೋಪಿಚಂದ್ ಮಹಿಳೆಯರ ಡಬಲ್ಸ್‌ನಲ್ಲಿ 15ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

Similar News