ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ: 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Update: 2023-05-31 12:35 GMT

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿನ ಅಭಾವ ಎದುರಾಗಿದ್ದು, ರಾಜ್ಯಕ್ಕೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೋರಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 

ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2.00 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3.00 ಟಿಎಂಸಿ ನೀರು ಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಕೊರತೆ ಎದುರಾಗಿದೆ. 

ಈ ಹಿಂದೆ, 1 ಟಿಎಂಸಿ ನೀರು ಬಿಡುಗಡೆಗೆ ಪತ್ರ ಬರೆಯಲಾಗಿತ್ತು. ಆಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದಕ್ಕೆ ಧನ್ಯವಾದಗಳು. ಈಗ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಮತ್ತೆ ನೀರು ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಅವರು ಕೋರಿದ್ದಾರೆ.

Similar News