ಪುತ್ತೂರಿನಲ್ಲಿ ಭಾರೀ ಗಾಳಿ, ಮಳೆ: ಉರುಳಿ ಬಿದ್ದ ಮರ, ವಿದ್ಯುತ್ ಕಂಬ

Update: 2023-05-31 14:11 GMT

ಪುತ್ತೂರು: ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಕೆಲ ಹೊತ್ತು ಭಾರೀ ಗಾಳಿ ಮತ್ತು ಮಳೆ ಸುರಿಯಿತು. ಇದರಿಂದಾಗಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ  ಒಳಮೊಗ್ರು ಗ್ರಾಮದ ಕುಂಬ್ರ ಶೇಖಮಲೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದು ಕೆಲ ಕಾಲ ಸಂಚಾರಕ್ಕೆ ಅಡಚಣೆ ಆಯಿತು.

ಮರ ಉರುಳುವ ಸಂದರ್ಭದಲ್ಲಿ ಈ ಭಾಗದಲ್ಲಿನ ವಿದ್ಯುತ್ ತಂತಿಗಳ ಮೇಲೂ ಬಿದ್ದ ಕಾರಣ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿತ್ತು. ಇದರಿಂದಾಗಿ ವಾಹನ ಮತ್ತು ಜನ ಸಂಚಾರಕ್ಕೆ ತೊಡಕಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತವು. ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತು. 

ಬಳಿಕ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಲಾ ಯಿತು. ವಿದ್ಯುತ್ ಕಂಬ ಮತ್ತು ತಂತಿಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.  

Similar News