ಎಂ.ಬಿ. ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ಹಂಚಿಕೆ

Update: 2023-05-31 14:22 GMT

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಳಿಯಿದ್ದ ಖಾತೆಗಳನ್ನು ಸಚಿವರಾದ ಎಂಬಿ ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಮರು ಹಂಚಿಕೆ ಮಾಡಲಾಗಿದೆ.

ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಐಟಿ, ಬಿಟಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಹಿಂದಿನ ಅವಧಿಯಲ್ಲೂ ಪ್ರಿಯಾಂಕ್‌ ಖರ್ಗೆ ಅವರು ಐಟಿ, ಬಿಟಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Similar News