ಸುಳ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು; ಮೂವರಿಗೆ ಗಾಯ

Update: 2023-06-01 13:56 GMT

ಸುಳ್ಯ: ವಿದ್ಯಾರ್ಥಿನಿಯರ ಮೇಲೆ ಕಾರು ಹರಿದು ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಇಂದು ಸಂಜೆ ಸಂಭವಿಸಿದೆ.

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದಾಗ ವಲ್ಲೀಶ ಸಭಾಭವನದ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಅವರನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ 4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Similar News