ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪಂಚಿನ ಮೆರವಣಿಗೆ

Update: 2023-06-01 14:34 GMT

ಉಡುಪಿ, ಜೂ.1: ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಮಾಡಿಯೂ ಪಾರಾಗಬಹುದು ಎಂಬ ಕೆಟ್ಟ ಸಂದೇಶವನ್ನು ಮಹಿಳಾ ಕುಸ್ತಿಪಟು ಗಳ ಮೇಲಿನ ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಕೇಂದ್ರ ಸರಕಾರ ಸಮಾಜಕ್ಕೆ ನೀಡಿದೆ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಟೀಕಿಸಿದ್ದಾರೆ.

ಉಡುಪಿ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿ ವತಿಯಿಂದ ಮಹಿಳಾ ಕುಸ್ತಿಪಟು ಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಬುಧವಾರ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ಎದುರು ಹಮ್ಮಿಕೊಳ್ಳ ಲಾದ ಪಂಚಿನ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಆರೋಪಿ ವಿರುದ್ಧ ಕಠಿಣ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ, ಸಾಂವಿಧಾನಿಕ ಸ್ಥಾನದಲ್ಲಿರುವ ವ್ಯಕ್ತಿಯೇ ಪ್ರಕರಣದಲ್ಲಿ ಭಾಗಿಯಾಗಿ ದ್ದರೂ ಬಂಧಿಸದಿರುವುದು ದೇಶದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬ ಸಂದೇಶವನ್ನು ನೀಡಿದಂತಾಗಿದೆ. ಮಹಿಳೆಯರೂ ಸೇರಿ ಎಲ್ಲರೂ ಬೀದಿಗಿಳಿದು ಹೋರಾಟ ಮಾಡದಿದ್ದರೆ ಮುಂದೆ ಯಾರೂ ಸುರಕ್ಷಿತರಾಗಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗಲಿದೆ ಎಂದರು.

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರ್ ಮಾತನಾಡಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರಕಾರ ಆರೋಪಿಯ ರಕ್ಷಣೆಗೆ ನಿಂತಿದೆ. ಇದು ದೇಶವೇ ತಲೆ ತಗ್ಗಿಸುವ ವಿಚಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೇಟಿ ಬಜಾವೋ, ಭೇಟಿ ಪಡಾವೋ ಎನ್ನುವ ಪ್ರಧಾನಿ ಮಹಿಳೆಯರಿಗೆ ಅನ್ಯಾಯವಾಗಿದ್ದರೂ ತುಟಿ ಬಿಚ್ಚದಿರು ವುದು ದುರಂತ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಆರೋಪಿಯ ಬಂಧನವಾಗದಿರುವುದು ಕಾನೂನು ಸುವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಾಗಿದೆ. ದೇಶದಲ್ಲಿ ಹಿಟ್ಲರ್ ಮಾದರಿಯ ಆಡಳಿತ ಜಾರಿಯಲ್ಲಿರುವ ಅನುಭವವಾಗುತ್ತಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿಯ ಮುಖಂಡರಾದ ಸುಂದರ್ ಮಾಸ್ತರ್, ಜಯನ್ ಮಲ್ಪೆ, ಶ್ಯಾಮ ರಾಜ್ ಬಿರ್ತಿ, ಗಣೇಶ್ ನೆರ್ಗಿ, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಇದ್ರೀಸ್ ಹೂಡೆ, ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಉದ್ಯಾವರ ನಾಗೇಶ್ ಕುಮಾರ್, ವೆರೊನಿಕಾ ಕರ್ನೆಲಿಯೊ ಮೊದಲಾದವರು ಉಪಸ್ಥಿತರಿದ್ದರು.

Similar News