ಉಡುಪಿ: ಜೂನ್ 3ರಂದು ಪೊಳಲಿ ಪ್ರಶಸ್ತಿ ಪ್ರದಾನ

Update: 2023-06-01 14:38 GMT

ಉಡುಪಿ, ಜೂ.1: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂನ್ 3ರ ಶನಿವಾರ ಬೆಳಿಗ್ಗೆ 10:30ಕ್ಕೆ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. 

ಪ್ರಶಸ್ತಿಯನ್ನು ಖ್ಯಾತ ಪುರಾತತ್ವ ತಜ್ಞರು, ಸಂಶೋಧಕರು ಹಾಗೂ ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ ಆದ ಡಾ. ಪುಂಡಿಕಾ ಗಣಪಯ್ಯ ಭಟ್ ಇವರಿಗೆ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ವಹಿಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಮಾಹೆಯ ಯುರೋಪಿಯನ್ ಅಧ್ಯಯನ ಕೇಂದ್ರದ  ಮುಖ್ಯಸ್ಥೆ ಡಾ. ನೀತಾ ಇನಾಂದಾರ್ ಉಪಸ್ಥಿತರಿರುವರು. 

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿರುವರು. ಇದೇ ಸಂದರ್ಭದಲ್ಲಿ ತುಳು ಲೇಖಕಿ, ಸಾಹಿತಿ ಆತ್ರಾಡಿ ಅಮೃತಾ ಶೆಟ್ಟಿ ಅವರು ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಕುರಿತು ಮಾತನಾಡಲಿರುವರು. 

ಚೇಳ್ಯಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಇಂದಿರಾ ಹೆಗ್ಡೆ ಉಪಸ್ಥಿತರಿ ರುವರು ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News