ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಆದೇಶ: ಸಚಿವ ಎಚ್‌ಸಿ ಮಹದೇವಪ್ಪ

Update: 2023-06-01 16:00 GMT

ಬೆಂಗಳೂರು, ಜೂ.1: ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವುದು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಶಾಲಾ ಹಾಗೂ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನೂ, ಇಲಾಖೆಯಲ್ಲಿ ಸಂವಿಧಾನಬದ್ಧವಾಗಿಎಲ್ಲರೂ ಕೆಲಸ ಮಾಡಬೇಕು. ಸಂವಿಧಾನ ಬದ್ಧವಾಗಿ ಕೆಲಸ ಮಾಡದವರ ವಿರುದ್ಧ ಚಾಟಿ ಬಿಸುತ್ತೇನೆ ಎಂದ ಅವರು, ರಾಜ್ಯದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿಳಂಬ ಕಾರಣಕ್ಕಾಗಿ ಕಾಲೇಜು ದಾಖಲಾತಿ ಸಮಸ್ಯೆ ಆಗುತ್ತಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‍ನಲ್ಲಿ ಕೇಂದ್ರದು ಶೇ.60 ಹಾಗೂ ರಾಜ್ಯದ್ದು ಶೇ.40 ಪಾಲಿದೆ. ಈ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಮಹದೇವಪ್ಪ ಇದೇ ಸಂದರ್ಭದಲ್ಲಿ ನುಡಿದರು.

Similar News