ಜೂ.3-4: ರಂಗಭೂಮಿ ಆನಂದೋತ್ಸವ

Update: 2023-06-01 15:06 GMT

ಉಡುಪಿ, ಜೂ.1: ಉಡುಪಿ ರಂಗಭೂಮಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ರಂಗಭೂಮಿ ಆನಂದೋತ್ಸವವನ್ನು ಜೂ.3 ಮತ್ತು 4ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಜೂ.3ರಂದು ಸಂಜೆ 5.45ಕ್ಕೆ ಕಾರ್ಯಕ್ರಮ ವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಲಿರುವರು. ಕರ್ಣಾಟಕ ಬ್ಯಾಂಕಿನ ನಿವೃತ್ತ ಸಿಇಓ ಮಹಾಬಲೇಶ್ವರ ಎಂ.ಎಸ್. ಗೌರವ ಸಂಮಾನ ನೀಡ ಲಾಗುವುದು. ಬಳಿಕ ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇವರಿಂದ ಧ್ವಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಜೂ.4ರಂದು ಸಂಜೆ 5.45ಕ್ಕೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ ಅವರಿಗೆ ಪ್ರದಾನ ಮಾಡಲಾಗುವುದು. ನಂತರ ನಟನ ಮೈಸೂರು ತಂಡದಿಂದ ಕಣಿವೆಯ ಹಾಡು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಎನ್.ರಾಜಗೋಪಾಲ ಬಲ್ಲಾಳ್, ಕೋಶಾಧಿಕಾರಿ ಭೋಜ ಯು., ಪದಾಧಿಕಾರಿ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

Similar News

ನಾಪತ್ತೆ