ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ

Update: 2023-06-01 15:39 GMT

ಬೆಂಗಳೂರು, ಜೂ.1: ನಾಲ್ಕೈದು ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇನ್ನೊಂದು ವಾರ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ.

ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಜೂನ್ 7ರವರೆಗೂ ಮುಂದುವರೆಯುವ ಲಕ್ಷಣಗಳಿದ್ದು, ಸದ್ಯಕ್ಕೆ ಸಂಪೂರ್ಣ ಬಿಡುವು ಕೊಡುವ ಸಾಧ್ಯತೆಗಳು ವಿರಳ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಭಾರೀ ಮಳೆಯಾಗುವ ಸಂಭವವೂ ಇದೆ ಎಂದರು.

ನೈರುತ್ಯ ಮುಂಗಾರು ಜೂ.8ರ ನಂತರ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ. ಈಗ ಮುಂಗಾರು ಪೂರ್ವ ಮಳೆ ಆರ್ಭಟಿಸುತ್ತಿರುವುದರಿಂದ ಮುಂಗಾರು ಮಳೆ ಆರಂಭವೇ ದುರ್ಬಲವಾಗುವ ಸಂಭವಿದೆ 

Similar News