ಉಡುಪಿ: ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ

Update: 2023-06-01 16:02 GMT

ಉಡುಪಿ, ಜೂ.1: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಥಾ ಮತ್ತು ಸಭಾ ಕಾರ್ಯಕ್ರಮ ಜೂನ್ 5ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಶಾಂತವೀರ ಶಿವಪ್ಪ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆ ವಹಿಸಲಿ ದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೆ ಮಚ್ಚಿಂದ್ರ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಹಿರಿಯ ಪರಿಸರ ಅಧಿಕಾರಿ ಜಯ ಹೆಗಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ನ ಆಯುಕ್ತ ಡಾ.ವಿಜಯೇಂದ್ರ ವಸಂತ ರಾವ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7:30ಕ್ಕೆ ಮಣಿಪಾಲ ಎಂ.ಜೆ.ಸಿ. ಕಾಲೇಜು ಮೈದಾನದಿಂದ ರಜತಾದ್ರಿಯ ವಾಜಪೇಯಿ ಸಭಾಂಗಣದವರೆಗೆ ಜಾಥಾ ನಡೆಯಲಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Similar News