ಸೋಮೇಶ್ವರ ಬೀಚ್‌ನಲ್ಲಿ ಅನೈತಿಕ ಪೊಲೀಸ್ ಗಿರಿ: ಆರೋಪ

Update: 2023-06-01 18:21 GMT

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ ಎಂದು ತಿಳಿದು ಬಂದಿದೆ.

ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವಿಹಾರಕ್ಕೆಂದು‌ ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಗಾಯಾಳುಗಳು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು 2 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Similar News